ಅಭಿಪ್ರಾಯ / ಸಲಹೆಗಳು

ನಮ್ಮ ಬಗ್ಗೆ

ಉನ್ನತ ಶಿಕ್ಷಣ ಇಲಾಖೆಯ ಕುರಿತು

 

ಒಂದು ರಾಷ್ಟ್ರದ ಸಾಮಾಜಿಕ, ಆರ್ಥಿಕ ಮತ್ತು ವೈಜ್ಞಾನಿಕ ಪ್ರಗತಿಯಲ್ಲಿ ಉನ್ನತ ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತದೆ. ಭಾರತದ ಉನ್ನತ ಶಿಕ್ಷಣ ವಲಯವು ಶಿಕ್ಷಣ ಸಂಸ್ಥೆಗಳ  ಮತ್ತು ಪ್ರವೇಶಾತಿ ಸಂಖ್ಯೆಯಲ್ಲಿ ಬೆರಗು ಮೂಡಿಸುವ ಹೆಚ್ಚಳ ಸಾಕ್ಷಿಯಾಗಿದೆ.  ಉನ್ನತ ಶಿಕ್ಷಣ ಇಲಾಖೆಯು ಕನಾಟಕದ ಎಲ್ಲ ಉನ್ನತ ಶಿಕ್ಷಣ ಸಂಸ್ಥೆಗಳ (ಸಾಮಾನ್ಯ ಮತ್ತು ತಾಂತ್ರಿಕ) ನಿಯಂತ್ರಣ ಪ್ರಾಧಿಕಾರವಾಗಿದೆ.

 

ರಾಜ್ಯದ ಉನ್ನತ ಶಿಕ್ಷಣ ಇಲಾಖೆ ಯೋಜನೆ, ಅನುಷ್ಠಾನ, ತನ್ನ ವ್ಯಾಪ್ತಿಯಲ್ಲಿನ ಎಲ್ಲ ವಿಶ್ವವಿದ್ಯಾಲಯಗಳು/ಉನ್ನತ ಶಿಕ್ಷಣ ಸಂಸ್ಥೆಗಳ ಉಸ್ತುವಾರಿ ಮತ್ತು ಮೌಲ್ಯಮಾಪನದಂಥ ಬಹುಮುಖಿ ಕರ್ತವ್ಯಗಳನ್ನು ನಿರ್ವಹಿಸುತ್ತದೆ. ಈ ಇಲಾಖೆ ಎಲ್ಲ ಶಿಕ್ಷಣ ಸಂಸ್ಥೆಗಳ ಆಡಳಿತಾತ್ಮಕ, ಶೈಕ್ಷಣಿಕ, ಗುಣಮಟ್ಟ ಸಂಬಂಧಿತ ಮತ್ತು ಹಣಕಾಸಿನ ಆಯಾಮಗಳನ್ನು ನಿಯಂತ್ರಿಸುತ್ತದೆ.

 

 ಇಂದಿನ ಮಾಹಿತಿ ತಂತ್ರಜ್ಞಾನ ಯುಗದಲ್ಲಿ ಇಡೀ ವಿಶ್ವವೇ ಜಾಗತಿಕ ಗ್ರಾಮವಾಗಿ ಪರಿವರ್ತನೆಗೊಳ್ಳುತ್ತಿದೆ. ಈ ಜಾಗತಿಕ ಸನ್ನಿವೇಶದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ನಮ್ಮ ಸಾಮಾಜಿಕ, ಮತ್ತು ರಾಷ್ಟ್ರೀಯ ಮೌಲ್ಯಗಳು ಹಾಗೂ ನಂಬಿಕೆಗಳಲ್ಲಿ ಅಪೂರ್ವ ಬದಲಾವಣೆಗಳಾಗುತ್ತಿವೆ.

 

ಸಾಂಪ್ರದಾಯಿಕ ಮೌಲ್ಯಗಳು ಹಾಗೂ ನಂಬಿಕೆಗಳಲ್ಲಿ ಆಗುತ್ತಿರುವ ಬದಲಾವಣೆಗಳು ಶಿಕ್ಷಣದ, ಅದರಲ್ಲೂ ಉನ್ನತ ಶಿಕ್ಷಣದ ಮೇಲೆ ಪ್ರಭಾವ ಬೀರುತ್ತಿರುವುದು ದೊಡ್ಡ ಸವಾಲಾಗಿದೆ.

ಉನ್ನತ ಶಿಕ್ಷಣ ಇಲಾಖೆ ಈ ಸವಾಲುಗಳನ್ನು ಎದುರಿಸಲು ಮತ್ತು ಉನ್ನತ ಶಿಕ್ಷಣವನ್ನು ಪೂರ್ವಾಗ್ರಹಮುಕ್ತವನ್ನಾಗಿ ಮಾಡುವ ಸರ್ಕಾರದ ಸಂಕಲ್ಪವನ್ನು ಸಾಕಾರಗೊಳಿಸಲು ಬದ್ಧವಾಗಿದೆ.

 

 

 

ಇತ್ತೀಚಿನ ನವೀಕರಣ​ : 06-08-2019 01:34 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉನ್ನತ ಶಿಕ್ಷಣ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080